ಮಹಾತ್ಮಾ ಗಾಂಧೀಜಿ ಮರಿ ಮೊಮ್ಮಗ ತುಷಾರ ಗಾಂಧಿಯನ್ನು ಮುಂಬೈನ ಸಾಂತಾ ಕ್ರೂಜ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕ್ವಿಟ್ ಇಂಡಿಯಾ ದಿನದ ಸ್ಮರಣಾರ್ಥ ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದ ಕಡೆ ಹೊರಟಿದ್ದ ಸಂದರ್ಭದಲ್ಲಿ ತುಷಾರ್ ಗಾಂಧಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕ್ರಾಂತಿ ಮೈದಾನದಲ್ಲಿ ಭಾರತ ಬಿಟ್ಟು ತೊಲಗಿ ಆಂದೋಲನದಲ್ಲಿ ಹುತಾತ್ಮರಾದವರ ಸ್ಮರಣಾರ್ಥ ಶಾಂತಿ ಮೆರವಣಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತಮ್ಮನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರ ಬಗ್ಗೆ ಟ್ವಿಟ್ ನಲ್ಲಿ ಬರೆದುಕೊಂಡಿರುವ ತುಷಾರ್, ನನ್ನ ಮುತ್ತಜ್ಜನನ್ನು ಇದೇ ದಿವಸದಂದು ಬ್ರಿಟಿಷರು ಬಂಧಿಸಿದ್ದರು ಎಂದು ನೆನಪು ಮಾಡಿಕೊಂಡಿದ್ದಾರೆ.
