ಭ್ರಷ್ಟಾಚಾರ ನಿಗ್ರಹ ಮಾಡಲು ಸರ್ಕಾರ ಕೆಲ ಕಠಿಣ ಕ್ರಮಕ್ಕೆ ಮುಂದಾಗಿದೆ. ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಸಿಂಹಸ್ವಪ್ನದಂತಿರುವ ಲೋಕಾಯುಕ್ತಕ್ಕೆ ಶಕ್ತಿ ತುಂಬಿರುವ ಸರ್ಕಾರ, ಒಂದು ಹೆಜ್ಜೆ ಮುಂದೆ ಹೋಗಿ ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳನ್ನು ಸೇವೆಯಿಂದಲೇ ವಜಾಗೊಳಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಸಂಬಂಧ ಕಾನೂನು ಸಚಿವ ಎಚ್ ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಅಧಿಕಾರಿಗಳನ್ನು ಕಡ್ಡಾಯ ನಿವೃತ್ತಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಇಷ್ಟು ದಿನ ಲೋಕಾಯುಕ್ತ ಸಂಸ್ಥೆ ಭ್ರಷ್ಟಾಚಾರದಲ್ಲಿ ಮುಳುಗಿದ್ದ ಅಧಿಕಾರಿಗಳಿಗೆ 5 ವರ್ಷಗಳ ಶಿಕ್ಷೆ ವಿಧಿಸುತ್ತಿದ್ದರೆ, ಸರ್ಕಾರ ಅಂತಹವರನ್ನು ಸೇವೆಯಿಂದಲೇ ವಜಾ ಮಾಡುವ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.
