ಗುತ್ತಿಗೆದಾರರ ಬಿಲ್ ಪಾವತಿಗೆ ಸಂಬಂಧಿಸಿದಂತೆ ಕಮಿಷನ್ ಕೇಳುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಪ್ರತಿಕ್ರಿಯಿಸಿದ್ದಾರೆ.
“ಗುತ್ತಿಗೆದಾರರ ಬಿಲ್ ವಿಚಾರವಾಗಿ ಬೊಮ್ಮಾಯಿ, ಅಶೋಕ್ ಸೇರಿದಂತೆ ವಿರೋಧ ಪಕ್ಷದ ನಾಯಕರು ಮಾತನಾಡುತ್ತಿದ್ದಾರೆ. ನಿಮ್ಮ ಸರ್ಕಾರ ಇದ್ದಾಗ ಗುತ್ತಿಗೆದಾರರ ಬಿಲ್ ಪಾವತಿ ಮಾಡಲಿಲ್ಲ ಯಾಕೆ?” ಎಂದು ಡಿ ಕೆ ಶಿವಕುಮಾರ ಪ್ರಶ್ನಿಸಿದ್ದಾರೆ.
ಈ ಹಿಂದೆ ಬೊಮ್ಮಾಯಿ ಅವರ ಸರ್ಕಾರ ಇತ್ತು. ಆಗ ಯಾಕೆ ಗುತ್ತಿಗೆದಾರರ ಬಿಲ್ ಪಾವತಿ ಮಾಡಲಿಲ್ಲ ಎಂದು ಗುಡುಗಿದ್ದಾರೆ. ಒಂದು ವೇಳೆ ಕಮಿಷನ್ ವಿಷಯ ಸಾಬೀತಾದಲ್ಲಿ ಇಂದೇ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. ಕಮಿಷನ್ ಆರೋಪದ ಕುರಿತು ತನಿಖಾ ಸಮಿತಿ ನೇಮಕ ಮಾಡಿದ್ದು, ತನಿಖೆ ನಡೆದಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರ ಆರೋಪದ ಬಗ್ಗೆ ಪ್ರತಿಕ್ರಿಯಿಸದ ಅವರು, ವರದಿ ಬರುವವರೆಗೆ ಕಾಯಿರಿ, ಸತ್ಯ ಹೊರಬರುತ್ತದೆ ಎಂದು ತಿಳಿಸಿದ್ದಾರೆ.
