ವಿಜಯಪುರ : ಇನ್ನು 6 ತಿಂಗಳಲ್ಲಿ ಕಾಂಗ್ರೇಸ್ ಸರ್ಕಾರ ಬೀಳಲಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ ಸಿಡಿಸಿದ್ದಾರೆ. ಅಲ್ಲಿಯವರೆಗೆ ಸಮಾಧಾನದಿಂದ ಇರುವಂತೆ ಅವರು ಕಾರ್ಯಕರ್ತರಿಗೆ ತಿಳಿಸಿದರು. ವಿಜಯಪುರದಲ್ಲಿ ಮಾತನಾಡಿದ ಅವರು ಕಾಂಗ್ರೇಸ್ ಸರ್ಕಾರದಲ್ಲಿ ಕಾಂಗ್ರೇಸ್ ಶಾಸಕರಿಗೆ ಅನುದಾನ ಸಿಗದೇ ಒದ್ದಾಡುತ್ತಿದ್ದಾರೆ. 6 ತಿಂಗಳ ನಂತರ ಮತ್ತೆ ಬಿಜೆಪಿ ಸರ್ಕಾರ ಬರಲಿದೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬಹಳಷ್ಟು ಕಾರಣಗಳಿಂದ ಬಿಜೆಪಿಗೆ ಸೋಲಾಯಿತು ಎಂದ ಯತ್ನಾಳ್, ಪಕ್ಷದ ಅನೇಕ ತಪ್ಪು ನಿರ್ಣಯಗಳು, ಬಿಜೆಪಿ ಸರ್ಕಾರದಲ್ಲಿ ಕೆಲವು ಸಚಿವರು ಮಾಡಿದ ಭ್ರಷ್ಟಾಚಾರ, ಹಿಂದುತ್ವದ ನಿರ್ಲಕ್ಷ ಮಾಡಿದ್ದಕ್ಕೆ ಸೋಲಾಯಿತು ಎಂದು ವಿಶ್ಲೇಷಿಸಿದರು.
