ರಾಜ್ಯದಲ್ಲಿ ಅಧಿಕ ಬಹುಮತದೊಂದಿಗೆ ಬಂದಿರುವ ಕಾಂಗ್ರೇಸ್ ಸರ್ಕಾರ ಐದು ಸಂಪೂರ್ಣವಾಗಿ ಐದು ವರ್ಷ ಪೂರೈಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ ತಿಳಿಸಿದರು. ದ್ವಜಾರೋಹಣದ ಸಂದರ್ಭದಲ್ಲಿ ಮಾತನಾಡಿದ ಅವರು ಕಾಂಗ್ರೇಸ್ ಸರ್ಕಾರದ ಬಗ್ಗೆ ಬಿಜೆಪಿ ಶಾಸಕ ಯತ್ನಾಳ ಕಾಂಗ್ರೇಸ್ ಸರ್ಕಾರ ಆರು ತಿಂಗಳಲ್ಲಿ ಪಟಾನಗೊಳ್ಳುತ್ತದೆ ಎಂದು ಹೇಳಿದ್ದು, ಕಾಂಗ್ರೇಸ್ ಸರ್ಕಾರವನ್ನು ಯಾರಿಂದಲೂ ಅಲುಗಾಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು. ಕಾಂಗ್ರೇಸ್ ಪಕ್ಷದ ಹಿರಿಯ ನಾಯಕ ದಿಗ್ವಿಜಯಸಿಂಗ ಸಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
