ಬೆಂಗಳೂರು ಶಾಸಕರ ಅಹವಾಲು ಆಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಇಂದು ಸಭೆ ನಡೆಸಿದರು. ಬೆಂಗಳೂರು ನಗರ ಜಿಲ್ಲೆಯ ಶಾಸಕರ ಜೊತೆ ಚರ್ಚೆ ನಡೆಸಿದ ಸಿ ಎಮ್ ಮತ್ತು ಡಿ ಸಿ ಎಮ್ ಕ್ಷೇತ್ರದ ಕಾಮಗಾರಿ ಬಗ್ಗೆ ಮಾಹಿತಿ ಪಡೆದುಕೊಂಡರು.
ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡುವರೆ ತಿಂಗಳ ಗತಿಸಿವೆ. ಮಾತು ಕೊಟ್ಟಂತೆ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತರಬೇಕಾಗಿದೆ. ಹೀಗಾಗಿ ಶಾಸಕರು ಸಹಕಾರ ನೀಡಬೇಕೆಂದು ತಿಳಿಸಿದರು. ಬ್ರಾಂಡ್ ಬೆಂಗಳೂರು ಯೋಜನೆ ಬಗ್ಗೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಬೆಂಗಳೂರು ನಗರ ಜಿಲ್ಲೆಯ ಶಾಸಕರ ಜೊತೆ ಚರ್ಚಿಸಿದರು.
