ಕಳೆದೊಂದು ವಾರದಿಂದ ಬಿಜೆಪಿಯ ಕೆಲ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗ್ತಾರೆ ಅನ್ನೋ ಸುದ್ದಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬೊಮ್ಮಾಯಿ, ನಾನೇ ಖುದ್ದು ಶಾಸಕರ ಜೊತೆ ಮಾತನಾಡಿದ್ದೇನೆ. ಅಂತಹ ಯಾವದೇ ವಿಚಾರವಿಲ್ಲ. ಯಾರಿಗೂ ಅಂತಹ ಪರಿಸ್ಥಿತಿ ಬಂದಿಲ್ಲ. ಇದು ಕೇವಲ ಗಾಳಿ ಸುದ್ದಿ ಅಂತ ಹೇಳಿದರು. ಕಾಂಗ್ರೇಸ್ ಮೇಲೆ ಬಂದಂತ ಆರೋಪ ಹೈಜಾಕ್ ಮಾಡಲು ಈ ತರದ ಕುತಂತ್ರ ನಡೆಸಿದ್ದಾರೆ ಎಂದು ಆರೋಪಿಸಿದರು.
