ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರಿಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಿದೆ. ಕಳೆದ ಹಲವು ವರ್ಷಗಳಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರಿಡುವಂತೆ ಹೋರಾಟಗಳು ನಡೆದಿದ್ದವು. ಕಡೆಗೂ ರಾಜ್ಯ ಸರ್ಕಾರ ಹೆಸರು ಶಿಫಾರಸ್ಸು ಮಾಡುವ ಮೂಲಕ ರಾಯಣ್ಣನ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಸರ್ಕಾರದ ತೆಗೆದುಕೊಂಡ ನಿರ್ಧಾರಕ್ಕೆ ಕರ್ನಾಟಕ ರಾಜ್ಯ ಯುವ ಕುರುಬರ ಸಂಘ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದು, ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಸಂಭ್ರಮಿಸಿದರು. ರೇವಣಸಿದ್ದೇಶ್ವರ ಮಠದ ಬಸವರಾಜ ದೇವರು, ರಮೇಶ ನಲವಡಿ, ಪ್ರಕಾಶ ಕಿತ್ತೂರ ಸೇರಿದಂತೆ ಕುರುಬ ಸಮಾಜದ ಗಣ್ಯರಿದ್ದರು
