ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಮಹತ್ವದ ಬೆಳವಣಿಗೆಗಳು ನಡೆದಿವೆ. ಕಳೆದ ವಾರವಷ್ಟೇ ಕರ್ನಾಟಕ ಫೈಲ್ಸ್ ನಲ್ಲಿ ಬಿತ್ತರಗೊಂಡಿದ್ದ ಸುದ್ದಿ ನಿಜವಾಗಿದೆ. ಇದೀಗ 15ಕ್ಕೂ ಹೆಚ್ಚು ಬಿಜೆಪಿಯ ಮಾಜಿ ಶಾಸಕರು ಕಾಂಗ್ರೇಸ್ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ ಎಂದು ರಾಜ್ಯ ಕಾಂಗ್ರೇಸ್ ಉಪಾಧ್ಯಕ್ಷ ಹಾಗೂ ಶಾಸಕ ವಿನಯ ಕುಲಕರ್ಣಿ ಹೇಳಿದ್ದಾರೆ. ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣ ಇದ್ದು, 15 ಮಾಜಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ವಿನಯ ಕುಲಕರ್ಣಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬಿಜೆಪಿಯ ಹಾಲಿ ಶಾಸಕರು ಕಾಂಗ್ರೇಸ್ ಸೇರೋದರ ಬಗ್ಗೆ ಮಾಹಿತಿ ಇಲ್ಲ ಎನ್ನುವ ಮೂಲಕ ಆಪರೇಷನ್ ನಡೆದಿದೆ ಅನ್ನೋದರ ಬಗ್ಗೆ ಸಂದೇಶ ಕೊಟ್ಟಿದ್ದಾರೆ.
