ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಇಂದು ನವಲಗುಂದ ತಾಲೂಕಿನ ಶಿರಕೋಳ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು. ಮೊದಲ ಬಾರಿಗೆ ಶಿರಕೋಳ ಗ್ರಾಮಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರನ್ನು ಬೃಹತ ಮೆರವಣಿಗೆ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ಕರೆತರಲಾಯಿತು. ಜಲಧಾರೆ ಹಾಗೂ ಜಲ ಜೀವನ ಮಿಷನ್ ಯೋಜನೆ ಅಡಿ 75 ಕೆ ಎಲ್ ಹಾಗೂ 50 ಕೆ ಎಲ್ ಓವರ್ ಹೆಡ್ ಟ್ಯಾಂಕ್ ನಿರ್ಮಾಣಕ್ಕೆ ಶೆಟ್ಟರ ಭೂಮಿ ಪೂಜೆ ನೆರವೇರಿಸಿದರು. ತಮ್ಮನ್ನು ಅದ್ದೂರಿಯಾಗಿ ಸ್ವಾಗತಿಸಿದ ಗ್ರಾಮಸ್ಥರನ್ನು ಕಂಡು ಶೆಟ್ಟರ ಪುಳಕಿತಗೊಂಡರು.
