ಹುಬ್ಬಳ್ಳಿಯ ಹೊರವಲಯದ,ಗದಗ ರಸ್ತೆಯ ರಿಂಗ್ ರೋಡ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಚಾಲಕ ರಫೀಕ ನದಾಪ್ 34 ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಜಾಗೃತಿ ಕಾರ್ಯ ನಿರ್ವಹಿಸುವ ವೇಳೆ ವಾಣಿಜ್ಯ ತೆರಿಗೆ ಇಲಾಖೆಯ ಟಾಟಾ ಸುಮೋ ವಾಹನಕ್ಕೆ, ಹಿಂಬಂದಿಯಿಂದ ಬಂದ ಲಾರಿ ಬಂದು ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ವಾಣಿಜ್ಯ ತೆರಿಗೆಯ ಇನ್ಸಪೆಕ್ಟರ್ ಹಾಗೂ ಸಿ ಟಿ ಓ ಪಾರಾಗಿದ್ದಾರೆ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ದೌಡಾಯಿಸಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.