ರಾಜ್ಯ ಕಾಂಗ್ರೇಸ್ ಸರ್ಕಾರಕ್ಕೆ ಯಾವದೇ ತೊಂದರೆಯಿಲ್ಲ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಪಕ್ಷಾಂತರ ನಡೆಯುತ್ತದೆ ಎಂದು ಮೊದಲೇ ಹೇಳಿದ್ದೆ, ಅದು ಈಗ ಆಗುತ್ತಿದೆ ಎಂದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧ ಭೀತಿ ಇದೆ. ಭೂಕಂಪನಗಳು, ಸುನಾಮಿಗಳಿಂದ ಹೆಚ್ಚಿನ ತೊಂದರೆಯಾಗಲಿದೆ ಎಂದರು. ರಾಜ್ಯ ರಾಜಕಾರಣದ ಬಗ್ಗೆ ಮತ್ತಷ್ಟು ಭವಿಷ್ಯ ನುಡಿದ ಶ್ರೀಗಳು, ಒಬ್ಬ ಮಹಿಳೆಗೆ ಮುಖ್ಯಮಂತ್ರಿ ಆಗುವ ಯೋಗ ಇದೆ ಎಂದು ಭವಿಷ್ಯ ನುಡಿದರು.
