ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಾವೇರಿ ಜಿಲ್ಲೆಯ ಬಿಜೆಪಿಯಲ್ಲಿ ಭಿನ್ನಮತ ಸೃಷ್ಟಿಯಾಗಿದೆ. ಸ್ಥಳೀಕರಿಗೆ ಟಿಕೇಟ್ ನೀಡಬೇಕು ಎಂದು ಮುಖಂಡರು ಪಟ್ಟು ಹಿಡಿದಿದ್ದಾರೆ. ಹಾವೇರಿ ಲೋಕಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಹಿರಿಯ ನಾಯಕ ಕೆ ಎಸ್ ಈಶ್ವರಪ್ಪ ತಮ್ಮ ಮಗ ಕಾಂತೇಶರನ್ನು ಕಣಕ್ಕಿಳಿಸಲು ತಯಾರಿ ನಡೆಸಿದ ಬೆನ್ನಲ್ಲೇ ಭಿನ್ನಮತ ಸ್ಫೋಟಗೊಂಡಿದೆ. ಕಳೆದ ವಾರ ಹಾವೇರಿಯ ಸಿಂದಗಿ ಮಠದಲ್ಲಿ ಕುಟುಂಬ ಸಮೇತ ರುದ್ರಯಾಗ ನಡೆಸಿದ್ದ ಕೆ ಎಸ್ ಈಶ್ವರಪ್ಪ, ಹಾವೇರಿ ಲೋಕಸಭಾ ಕ್ಷೇತ್ರದಿಂದ ತಮ್ಮ ಕುಟುಂಬದಿಂದ ಒಬ್ಬರು ಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆಂದು ಹೇಳಿದ್ದರು.
ಈಗಾಗಲೇ ಯುವ ಬಿಜೆಪಿ ಮುಖಂಡ, ರಾಜ್ಯ ಉಗ್ರಾಣ ನಿಗಮದ ಮಾಜಿ ಉಪಾಧ್ಯಕ್ಷ ಶರಣು ಅಂಗಡಿ ಕ್ಷೇತ್ರದಾಧ್ಯಂತ ಸಂಚರಿಸಿ ಪಕ್ಷ ಬಲಪಡಿಸುತ್ತಿದ್ದಾರೆ. ಪ್ರತಿ ಹಳ್ಳಿಗಳಲ್ಲಿ ಸಭೆ ನಡೆಸುತ್ತಿದ್ದು, ಯುವ ನಾಯಕತ್ವವನ್ನು ಪಕ್ಷದ ಹೈಕಮಾಂಡ ಗುರುತಿಸಿ ಸ್ಪರ್ಧೆಗೆ ಅವಕಾಶ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ. ಈಶ್ವರಪ್ಪನವರ ಮಗನಿಗೆ ಪರೋಕ್ಷವಾಗಿ ವಿರೋದ ವ್ಯಕ್ತವಾಗುತ್ತಿದೆ.