ರಾಜ್ಯ ಕಾಂಗ್ರೇಸ್ ಸರ್ಕಾರದ ಬಹು ನಿರೀಕ್ಷಿತ ಗೃಹಲಕ್ಷ್ಮಿ ಯೋಜನೆಗೆ ಸಾಂಸ್ಕೃತೀಕ ನಗರಿ ಮೈಸೂರು ಸಜ್ಜಾಗಿದೆ. ಅಗಸ್ಟ್ 30 ರಂದು ಮೈಸೂರಿನ ಮಹಾರಾಜಾ ಕಾಲೇಜು ಮೈದಾನದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದೆ. ಈ ಮೊದಲು ಗಡಿನಾಡು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲು ತೀರ್ಮಾನಿಸಲಾಗಿತ್ತು. ಎಲ್ಲ ಸಿದ್ಧತೆಗಳು ನಡೆದಿದ್ದವು. ಸಧ್ಯ ಗೃಹಲಕ್ಷ್ಮಿ ಕಾರ್ಯಕ್ರಮ ಮೈಸೂರಿಗೆ ಸ್ಥಳಾಂತರಗೊಂಡಿದೆ. ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹಾಗೂ ಸಚಿವ ಎಚ್ ಸಿ ಮಹಾದೇವಪ್ಪ ಪರಿಶೀಲನೆ ನಡೆಸಿದರು.