ಸಚಿವ ಚೆಲುವರಾಯ ಸ್ವಾಮಿ ವಿರುದ್ಧ ಲಂಚದ ಆರೋಪ ಹೊರಿಸಿ ರಾಜ್ಯಪಾಲರಿಗೆ ಪತ್ರ ಬರೆದಿದ್ದ ಇಬ್ಬರು ಅಧಿಕಾರಿಗಳನ್ನು ಸಿ ಐ ಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರಪಡಿಸಲಾಯಿತು. ಬಂಧಿತ ಅಧಿಕಾರಿಗಳಾದ ಗುರುಪ್ರಸಾದ ಹಾಗೂ ತಾಂತ್ರಿಕ ಸುದರ್ಶನ ಅವರನ್ನು ನ್ಯಾಯಾಲಯ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕೊಟ್ಟಿದೆ. ರಾಜಾರೋಷವಾಗಿ ಸಚಿವರು ಲಂಚ ಪಡೆಯುತ್ತಿದ್ದಾರೆಂದು ವಿಪಕ್ಷಗಳು ಆರೋಪಿಸಿ, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದವು. ಲಂಚದ ಆರೋಪ ಹೊರಿಸಿ ರಾಜ್ಯಪಾಲರಿಗೆ ಪತ್ರ ಬರೆದಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಈ ಪ್ರಕರಣವನ್ನು ಸಿ ಐ ಡಿ ಗೆ ಒಪ್ಪಿಸಿತ್ತು.
