ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಸರ್ಕಾರ ಚಿಂತನೆ ನಡೆಸಿದೆ. “ಕರ್ನಾಟಕದ ಶಿಕ್ಷಣ ವ್ಯವಸ್ಥೆಯು ದೇಶಕ್ಕೆ ಮಾದರಿಯಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ರಾಷ್ಟ್ರೀಯ ಶಿಕ್ಷಣದ ಸಾಧಕ ಭಾಧಕಗಳ ಕುರಿತು ಚರ್ಚಿಸಿದರು. ರಾಜ್ಯದ ಶಿಕ್ಷಣ ನೀತಿಯ ಗುಣಮಟ್ಟವನ್ನು ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ. ನಮ್ಮ ರಾಜ್ಯದ ಮಕ್ಕಳನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಾತ್ಮಕವಾಗಿ ಸಿದ್ದಗೊಳಿಸಬೇಕು ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು. ರಾಷ್ಟ್ರೀಯ ಶಿಕ್ಷಣವನ್ನು ರದ್ದುಗೊಳಿಸಿ, ರಾಜ್ಯ ಶಿಕ್ಷಣ ನೀತಿಯನ್ನು ಮರಳಿ ಜಾರಿಗೊಳಿಸುವ ಭರವಸೆ ನೀಡಿದ್ದೇವೆ ಮತ್ತು ಆ ಭರವಸೆಯನ್ನು ಈಡೇರಿಸಲು ನಾವು ಬದ್ಧರಾಗಿದ್ದೇವೆ ಎಂದರು.
