ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸಾಮಾಜಿಕ ಸ್ವಾಸ್ತ್ಯ ಹಾಳು ಮಾಡುವ ಸುಳ್ಳು ಸುದ್ದಿಗಳ ನಿಯಂತ್ರಣಕ್ಕೆ ಕಡಿವಾಣ ಹಾಕಲು ರಾಜ್ಯದಲ್ಲಿ ಫಾಸ್ಟ್ ಚೆಕ್ ಘಟಕ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಸುಳ್ಳು ಸುದ್ದಿಗಳನ್ನು ಸೃಷ್ಟಿಸುವ ಮತ್ತು ಹರಿ ಬಿಡುವ ವ್ಯಕ್ತಿ ಮತ್ತು ಸಂಸ್ಥೆಗಳ ಪತ್ತೆ ಹಚ್ಚುವ ಕೆಲಸವನ್ನು ಈ ಘಟಕ ಮಾಡಲಿದೆ. ಅಲ್ಲದೆ ಸುಳ್ಳು ಸುದ್ದಿ ಹಬ್ಬಿಸುವವರನ್ನು ಶಿಕ್ಷೆಗೊಳಪಡಿಸಲು ಅನುಕೂಲ ಕಲ್ಪಿಸುವ ಕಾಯ್ದೆಯನ್ನು ತರಲು ಯೋಚಿಸಲಾಗಿದೆ ಎಂದು ತಿಳಿದು ಬಂದಿದೆ.
