ಬಾಹ್ಯಾಕಾಶ ಸಂಶೋಧನೆಯಲ್ಲಿ ಭಾರತದ ಪ್ರತಿಷ್ಟಿತ ಇಸ್ರೋ ವಿಜ್ಞಾನಿಗಳು ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಚಂದ್ರಯಾನ 3 ಯಶಸ್ವಿಯಾಗಿದೆ. ಚಂದ್ರಯಾನ 3 ರ ವಿಕ್ರಮ ಲ್ಯಾಂಡರ್ ಚಂದ್ರನ ದಕ್ಷಿಣಕ್ಕೆ ಸುರಕ್ಷಿತವಾಗಿ ಇಳಿಯುವ ಮೂಲಕ ಭಾರತದ ವಿಜ್ಞಾನಿಗಳು ವಿಶ್ವಕ್ಕೆ ತಮ್ಮ ಸಾಮರ್ಥ್ಯ ತೋರಿಸಿದರು.
ಇಸ್ರೋ ವಿಜ್ಞಾನಿಗಳ ಈ ಐತಿಹಾಸಿಕ ಸಾಧನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕರ್ನಾಟಕದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ , ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿ ಎಸ್ ಯಡಿಯೂರಪ್ಪ, ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಅನೇಕ ದಿಗ್ಗಜರು ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.
