ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಮತ್ತೆ ಬಂಧನಕ್ಕೊಳಗಾಗಿದ್ದಾರೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಾಡಬೋಳ ಠಾಣೆ ಪೊಲೀಸರು ಮಣಿಕಂಠ ರಾಠೋಡರನ್ನು ಮೂರು ದಿನಗಳ ಅವಧಿಯಲ್ಲಿ ಎರಡು ಬಾರಿ ಬಂಧಿಸಿದ್ದಾರೆ. ಸಚಿವ ಪ್ರಿಯಾಂಕ ಖರ್ಗೆ ರಾಜಕೀಯ ಎದುರಾಳಿಯಾಗಿರುವ ಮಣಿಕಂಠ ನಿನ್ನೇ ಚಿತ್ತಾಪುರದಲ್ಲಿ ನಡೆದ ಕೊಲೆ ಪ್ರಕರಣದ ವಿರುದ್ದ ಬೃಹತ ಪ್ರತಿಭಟನೆ ಹಮ್ಮಿಕೊಂಡಿದ್ದರು. ಪೊಲೀಸ್ ವ್ಯವಸ್ಥೆ ಬಗ್ಗೆ ಕಿಡಿಕಾರಿದ್ದ ಮಣಿಕಂಠ, ಸಚಿವ ಪ್ರಿಯಾಂಕ ಖರ್ಗೆ ಹೇಳಿದಂತೆ ಪೊಲೀಸ ಕೇಳುತ್ತಿದ್ದಾರೆ ಎಂದು ಆರೋಪಿಸಿದ್ದರು. ನಿನ್ನೆಯಷ್ಟೇ ಠಾಣೆಯಿಂದ ಜಾಮಿನು ಪಡೆದು ಬಂದಿದ್ದ ಮಣಿಕಂಠ ರಾಠೋಡರನ್ನು ಇಂದು ಮತ್ತೆ ಬಂಧಿಸಲಾಗಿದೆ. ಪ್ರಿಯಾಂಕ ಖರ್ಗೆಯವರು, ಅನ್ಯಾಯದ ವಿರುದ್ದ ದ್ವನಿ ಎತ್ತಿದ ನನ್ನನ್ನು ರಾಜಕೀಯವಾಗಿ ಮುಗಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿದ್ದರು. ಒಟ್ನಲ್ಲಿ ಕಲಬುರಗಿ ಜಿಲ್ಲೆಯ ರಾಜಕೀಯ ಜಿದ್ದಾ ಜಿದ್ದಿಗೆ ಕಾರಣವಾಗಿದ್ದು, ಸೇಡಿನ ರಾಜಕಾರಣ ನಡೆಯುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
