ಧಾರವಾಡ ಜಿಲ್ಲೆಯ ರಾಜಕೀಯ ದಿನದಿಂದ ದಿನಕ್ಕೆ ತೀವ್ರ ಕುತೂಹಲ ಮೂಡಿಸುತ್ತಿದೆ. ಕಾಂಗ್ರೇಸ್ ಆಪರೇಷನ್ ಸಕ್ಸಸ್ ಮಾಡಿದೆ. ಧಾರವಾಡ ಜಿಲ್ಲೆಯ ಇಬ್ಬರು ಬಿಜೆಪಿಯ ಮಾಜಿ ಶಾಸಕರು ಕಾಂಗ್ರೇಸ್ ಸೇರಲಿದ್ದಾರೆ.
ಕುಂದಗೋಳದ ಮಾಜಿ ಶಾಸಕ ಎಸ್ ಐ ಚಿಕ್ಕನಗೌಡರ, ನವಲಗುಂದದ ಮಾಜಿ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ ಕಾಂಗ್ರೇಸ್ಸಿಗೆ ಬರುವ ಮಾಹಿತಿ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ತಿಳಿಸಿದ್ದಾರೆ. ಆ ಇಬ್ಬರ ಜೊತೆ ನಡೆಸಿದ ಮಾತುಕತೆ ಬಹುತೇಕ ಯಶಸ್ವಿಯಾಗಿದೆ ಎನ್ನಲಾಗಿದೆ. ಕರ್ನಾಟಕ ಫೈಲ್ಸ್ ಗೆ ಸಿಕ್ಕ ಮಾಹಿತಿಯಂತೆ ಮೈಸೂರಿನಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಯೋಜನೆಯ ಅನುಷ್ಟಾನ ಕಾರ್ಯಕ್ರಮಕ್ಕೆ ಬರಲಿರುವ ರಾಹುಲ್ ಗಾಂಧಿಯವರನ್ನು ಈ ಇಬ್ಬರು ನಾಯಕರು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಕಾಂಗ್ರೇಸ್ ಹೈಕಮಾಂಡ ಈ ಕ್ಷೇತ್ರವನ್ನು ತೆಕ್ಕೆಗೆ ಹಾಕಿಕೊಳ್ಳಲು ಭಾರಿ ಪ್ರಯತ್ನ ನಡೆಸಿದೆ
