ಕಾಂಗ್ರೇಸ್ ಪಕ್ಷದ ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಕಾರ್ಯಕ್ರಮಕ್ಕೆ ನವಲಗುಂದ ತಾಲೂಕಿನ ಗುಮ್ಮಗೋಳದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಗೃಹಲಕ್ಷ್ಮಿ ಯೋಜನೆ ಆರಂಭಕ್ಕೆ ಜಾತಕ ಪಕ್ಷಿಯಂತೆ ಕಾಯ್ದು ಕುಳಿತಿದ್ದ ಗೃಹಿಣಿಯರು ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ವೇಳೆ ಗುಮ್ಮಗೋಳ ಪಂಚಾಯ್ತಿಯ ಅಧ್ಯಕ್ಷರು, ಸದಸ್ಯರು ಸೇರಿದಂತೆ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
