ನಾಡು ಕಂಡ ಧೀಮಂತ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಕನಸು ಕೊನೆಗೂ ನನಸಾಗಿದೆ. ಬೆಂಗಳೂರು ಶಿವಮೊಗ್ಗ ನಡುವೆ ಬಹು ನಿರೀಕ್ಷಿತ ನಾಗರಿಕ ವಿಮಾನ ಹಾರಾಟ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಂದ ಲೋಕಾರ್ಪಣೆಗೊಂಡಿದ್ದ ಶಿವಮೊಗ್ಗ ವಿಮಾನ ನಿಲ್ದಾಣ ಇಂದು ಮಧುವಣಗಿತ್ತಿಯಂತೆ ಶೃಂಗಾರಗೊಂಡಿತ್ತು. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟ ಮೊದಲ ಇಂಡಿಗೋ ವಿಮಾನದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಎಮ್ ಬಿ ಪಾಟೀಲ್, ಸಂಸದ ಬಿ ವೈ ರಾಘವೇಂದ್ರ, ಶಾಸಕ ಬಿ ವೈ ವಿಜಯೇಂದ್ರ, ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, ಮಾಜಿ ಸಚಿವರಾದ ಹಾಲಪ್ಪ ಹಾಗೂ ಭಾರತಿ ಶೆಟ್ಟಿ ಪ್ರಯಾಣ ಮಾಡಿದರು. ವಿಮಾನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಎಲ್ಲ ಪ್ರಯಾಣಿಕರನ್ನು ಸ್ವಾಗತಿಸಲಾಯಿತು.
