ರಾಜ್ಯ ಸರ್ಕಾರ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ ಘೋಷಿಸಿದೆ. ಪ್ರಾಥಮಿಕ ಶಾಲೆಯ 20 ಹಾಗೂ ಪ್ರೌಢಶಾಲೆಯ 11 ಶಿಕ್ಷಕರನ್ನು ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಲು ತೀರ್ಮಾನಿಸಿದೆ. ಧಾರವಾಡ ತಾಲೂಕು ಮುರಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶೇಖಪ್ಪ ಭೀಮಪ್ಪ ಕೇಸರಿ ಅವರು ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿರುವ ಮಹಿಳಾ ಶಿಕ್ಷಕಿಯರಿಗೆ ಸಾವಿತ್ರಿ ಬಾಯಿ ಫುಲೆ ಹೆಸರಿನಲ್ಲಿ ಸಪ್ಟೆಂಬರ 5 ರಂದು ನೀಡಲಾಗುತ್ತಿದೆ.
