ಗಡಿನಾಡು ಬೆಳಗಾವಿ ಜಿಲ್ಲೆಯ ರಾಜಕಾರಣ ಮತ್ತೆ ರಾಜ್ಯದ ಗಮನ ಸೆಳೆದಿದೆ. ಬೆಂಗಳೂರು ಪಡಿಸಿದರೆ ಅತೀ ಹೆಚ್ಚು ಸುದ್ದಿ ಮಾಡೋದು ಅಂದ್ರೆ ಅದು ಬೆಳಗಾವಿ ರಾಜಕಾರಣ. ಬೆಳಗಾವಿ ಜಿಲ್ಲೆಯಲ್ಲಿ ಲೋಕಸಭಾ ಕಾವು ಜೋರಾಗಿದೆ.
ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ಸಿನಿಂದ ಇಬ್ಬರು ಸಚಿವರ ಕುಟುಂಬದ ನಡುವೆ ಕದನ ಆರಂಭವಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ತಮ್ಮ ಮಗ ಮೃನಾಲ್ ಹೆಬ್ಬಾಳಕರನನ್ನು ಬೆಳಗಾವಿ ಲೋಕಸಭಾ ಆಖಾಡಕ್ಕೆ ಸಿದ್ದ ಮಾಡುತ್ತಿದ್ದಾರೆ,
ಮತ್ತೊಂದೆಡೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೋಳಿ ತಮ್ಮ ಮಗಳು ಪ್ರಿಯಾಂಕರನ್ನು ಲೋಕಸಭಾ ಅಖಾಡಕ್ಕೆ ಇಳಿಸಲು ಸಜ್ಜಾಗಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಅತೀ ಕಡಿಮೆ ಮತಗಳ ಅಂತರದಲ್ಲಿ ಸೋಲು ಅನುಭವಿಸಿದ್ದ ಸತೀಶ ಜಾರಕಿಹೊಳಿ ಶತಾಯ ಗತಾಯ ಈ ಸಲ ಬೆಳಗಾವಿ ಲೋಕಸಭಾ ಕ್ಷೇತ್ರ ಗೆಲ್ಲಲೇಬೇಕು ಎಂದು ಹಠ ತೊಟ್ಟಿದ್ದಾರೆ. ಮಗಳು ಪ್ರಿಯಾಂಕಾ ಜಾರಕಿಹೊಳಿ ಸಕ್ರಿಯ ರಾಜಕಾರಣದಲ್ಲಿ ತೊಡಗಿ, ಜನರ ಜೊತೆ ಬೆರೆಯುತ್ತಿದ್ದಾರೆ.
ಮತ್ತೊಂದೆಡೆ ಲಕ್ಷ್ಮೀ ಹೆಬ್ಬಾಳಕರ ಮಗ ಮೃನಾಲ್ ಹೆಬ್ಬಾಳಕರ ಸಹ ರಾಜಕೀಯ ಪ್ರವೇಶ ಮಾಡಿದ್ದಾರೆ. ತಮ್ಮ ಮಕ್ಕಳಿಗೆ ಲೋಕಸಭಾ ಚುನಾವಣೆಯ ಟಿಕೆಟ್ ಕೊಡಿಸಲು ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳಕರ ನಡುವೆ ಮುಸುಕಿನ ಗುದ್ದಾಟ ನಡೆದಿದೆ.