ಶಕ್ತಿ ಯೋಜನೆಯಿಂದ ಖಾಸಗಿ ವಾಹನ ಮಾಲೀಕರಿಗೆ ತೊಂದರೆಯಾಗಿದೆ. ಸರ್ಕಾರ ಅವರ ಅಹವಾಲು ಸ್ವೀಕರಿಸಿ ಪರಿಹಾರ ಕಂಡು ಹಿಡಿಯಬೇಕೆಂದು ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಫ್ರಿ ಕೊಟ್ಟಿದ್ದೇವೆಂದು ಮನಬಂದಂತೆ ನಡೆದುಕೊಳ್ಳಬಾರದು ಎಂದು ಹೇಳುವ ಮೂಲಕ ಶಕ್ತಿ ಯೋಜನೆಗೆ ಅಪಸ್ವರ ಹೊರಹಾಕಿದರು. ಕೆ ಎಸ್ ಆರ್ ಟಿ ಸಿ ನಷ್ಟದಲ್ಲಿದೆ. ಸರ್ಕಾರ ಕೆ ಎಸ್ ಆರ್ ಟಿ ಸಿ ಗೆ ಹಣ ಕೊಡುತ್ತಿಲ್ಲ ಎಂದು ಆರೋಪಿಸಿದರು.
