Download Our App

Follow us

Home » ಆರೋಗ್ಯ » ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿದ ಸಾರಿಗೆ ಸಂಸ್ಥೆ

ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿದ ಸಾರಿಗೆ ಸಂಸ್ಥೆ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು (NWKRTC) ಗಣೇಶ ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು ಬೆಂಗಳೂರು ಮತ್ತು ಪುಣೆ ಸೇರಿದಂತೆ ವಿವಿಧ ಕೇಂದ್ರಗಳಿಂದ ಸೆಪ್ಟೆಂಬರ್ 15 ರಿಂದ 18 ರವರೆಗೆ 500 ಕ್ಕೂ ಹೆಚ್ಚು ಹೆಚ್ಚುವರಿ ಬಸ್‌ಗಳನ್ನು ಓಡಿಸಲು ನಿರ್ಧರಿಸಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ, ವಾಯುವ್ಯ ಸಾರಿಗೆ ಸಂಸ್ಥೆ ವೋಲ್ವೋ, ಸ್ಲೀಪರ್ ಕೋಚ್, ರಾಜ ಹಂಸ ಗಳ ಹೆಚ್ಚುವರಿ 50 ಟ್ರಿಪ್‌ಗಳನ್ನು ಮತ್ತು ಹುಬ್ಬಳ್ಳಿ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ ಮತ್ತು ಬಾಗಲಕೋಟೆಗೆ ಬೆಂಗಳೂರು ಮತ್ತು ಪುಣೆ ಮತ್ತು ಇತರ ಸ್ಥಳಗಳಿಂದ ಸುಮಾರು 200 ಎಕ್ಸ್‌ಪ್ರೆಸ್ ಬಸ್‌ಗಳನ್ನು ಓಡಿಸಲು ಯೋಜಿಸಿದೆ. 

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಕರ್ಣ, ಶಿರಸಿ, ಕರ್ಣ, ಶಿರಸಿ, ಮತ್ತಿತರ ಊರುಗಳಿಗೆ 1200 ಹೆಚ್ಚುವರಿ ವಾಹನಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. , ಕಲಬುರ್ಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿಗೂ ಸಹ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಚಿತವಾಗಿ ಟಿಕೇಟ್ ಬುಕ್ ಮಾಡುವ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ 5 ರಿಂದ 10 ರಷ್ಟು ರಿಯಾಯತಿ ಘೋಷಿಸಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರೆಡ್ಡಿ ಏನಂದಿರಿಗೀನಾ ! ರೊಚ್ಚಿಗೆದ್ದ ರಾಮುಲು. ಗಣಿ ನಾಡಿನಲ್ಲಿ ದೂಳು ಮೆತ್ತಿಕೊಂಡ ನಾಯಕರು

ಬಳ್ಳಾರಿ ರಾಜಕೀಯ, ಒಂದು ಕಾಲಕ್ಕೆ ರಾಜ್ಯದ ರಾಜಕಾರಣವನ್ನು ತನ್ನತ್ತ ಸೆಳೆದಿತ್ತು. ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಜೋಡಿ, ಬಳ್ಳಾರಿಯನ್ನು ಬಿಜೆಪಿಯ ಭದ್ರಕೋಟೆಯನ್ನಾಗಿ ಮಾಡಿದ್ದರು. ಆದರೆ ಈಗ ಬಳ್ಳಾರಿಯಲ್ಲಿ

Live Cricket

error: Content is protected !!