ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಮುಕ್ತಿ ಮಂದಿರದಲ್ಲಿ ಇಂದು ಕೋಟಿ ಲಿಂಗ ಸ್ಥಾಪನೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಜಗದೀಶ ಶೆಟ್ಟರ ಅವರನ್ನು ಆಮಂತ್ರಿಸಲಾಗಿತ್ತು. ಗದಗ ಜಿಲ್ಲೆಯ ಶಾಸಕರು ಸಮಾರಂಭದಲ್ಲಿ ಹಾಜರಿದ್ದರು. ಸಮಾರಂಭದಲ್ಲಿ ಸ್ವಾಮೀಜಿಗಳ ಎಡ ಹಾಗೂ ಬಲ ಭಾಗದಲ್ಲಿ ಕುಳಿತಿದ್ದ ಬಸವರಾಜ ಬೊಮ್ಮಾಯಿ ಹಾಗೂ ಜಗದೀಶ ಶೆಟ್ಟರ ಪರಸ್ಪರ ಮುಖ ನೋಡಿ ಮಾತನಾಡದೆ ಇದ್ದುದು ಕಂಡು ಬಂತು. ಇಬ್ಬರು ಮಾಜಿ ಮುಖ್ಯಮಂತ್ರಿಗಳು ಪರಸ್ಪರ ಮಾತನಾಡದೇ ಇರೋದನ್ನ ಸಭಿಕರು ಗಮನಿಸಿದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಇಬ್ಬರ ಉಪಸ್ಥಿತಿ ಕುತೂಹಲ ಮೂಡಿಸಿತ್ತು.
![Karnataka Files](https://secure.gravatar.com/avatar/3c8a792dfb280b36a94603273157ff83?s=96&r=g&d=https://karnatakafiles.com/wp-content/plugins/userswp/assets/images/no_profile.png)