ಉತ್ತರ ಕರ್ನಾಟಕದ ಹೆಬ್ಬಾಗಿಲು ಹುಬ್ಬಳ್ಳಿ, ಗಣೇಶ ಪ್ರತಿಷ್ಠಾಪನೆ ವಿಷಯವಾಗಿ ಸುದ್ದಿ ಮಾಡಿದೆ. ಈ ಸುದ್ದಿ ರಾಜ್ಯ ಬಿಜೆಪಿಯಲ್ಲಿಯೂ ಸದ್ದು ಮಾಡಿದೆ. ಮೈದಾನದ ವಿಷಯವಾಗಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕೆಂಡ ಕಾರಿದೆ. ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಪಟ್ಟು ಹಿಡಿದಿರುವ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಬಿಜೆಪಿಯ ಶಾಸಕರಾದ ಅರವಿಂದ ಬೆಲ್ಲದ ಮತ್ತು ಮಹೇಶ ಟೆಂಗಿನಕಾಯಿ ಪ್ರತಿಭಟನೆಯ ನೇತೃತ್ವ ವಹಿಸಿದ್ದಾರೆ. ಪಾಲಿಕೆ ಸಾಮಾನ್ಯ ಸಭೆಯಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಿ ಠರಾವು ಮಾಡಲಾಯಿತು. ಈಗ ಅದನ್ನೇ ಮುಂದಿಟ್ಟುಕೊಂಡು ಬಿಜೆಪಿ ಕಾರ್ಯಕರ್ತರು ಗಣೇಶ ಪ್ರತಿಷ್ಟಾಪನೆಗೆ ಅನುಮತಿ ಕೊಡುವಂತೆ ಒತ್ತಾಯಿಸುತ್ತಿದ್ದಾರೆ.
ಏತನ್ಮಧ್ಯೆ ರಾಜ್ಯ ಬಿಜೆಪಿ ಟ್ವಿಟ್ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಸಿದ್ದರಾಮಯ್ಯನವರೇ, ನಿಮಗೆ ಚನ್ನಮ್ಮ ಆಟದ ಮೈದಾನದ ಮೇಲೆ ಯಾಕೆ ನಿಮ್ಮ ಕೆಂಗಣ್ಣು ಎಂದು ಪ್ರಶ್ನಿಸಿದ್ದಾರೆ. ಟಿಪ್ಪು ಜಯಂತಿ, ನಮಸ್ಕಾರ ಮಾಡಲು ಅವಕಾಶ ಕೊಡುತ್ತೀರಿ, ಗಣೇಶ ಹಬ್ಬಕ್ಕೆ ಯಾಕೆ ಕಿರಿಕಿರಿ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಇದೇನಾ ನಿಮ್ಮ ಸರ್ವ ಜನಾಂಗದ ಶಾಂತಿಯ ತೋಟದ ದ್ವನಿ ಎಂದು ಟ್ವಿಟ್ಟರನಲ್ಲಿ ಕಾಲು ಎಳೆದಿದೆ.