ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆಯ ಆವರಣದಲ್ಲಿ ಬಿಜೆಪಿ ಹೋರಾಟ ಮುಂದುವರೆದಿದೆ. ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ನಿನ್ನೆಯಿಂದ ಅಹೋರಾತ್ರಿ ಹೋರಾಟ ನಡೆಯುತ್ತಿದ್ದು, ಬೆಳಿಗ್ಗೆ ಹುಬ್ಬಳ್ಳಿ ಸೆಂಟ್ರಲ್ ಶಾಸಕ ಮಹೇಶ ಟೆಂಗಿನಕಾಯಿ ಹೋರಾಟಕ್ಕೆ ಸಾಥ್ ಕೊಟ್ಟಿದ್ದಾರೆ.
ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿ ಎದುರು ಹೋರಾಟ ಮುಂದುವರೆದಿದೆ. ಮತ್ತೊಂದೆಡೆ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿರೋಧಿಸಿ ಸಲ್ಲಿಸಿರುವ ಅರ್ಜಿ ಇಂದು ವಿಚಾರಣೆಗೆ ಬರಲಿದೆ.ಈದ್ಗಾ ಮೈದಾನದ ಸುತ್ತ ಬಿಗಿ ಪೊಲೀಸ ಬಂದುಬಸ್ತ ಮಾಡಲಾಗಿದ್ದು, ಹದ್ದಿನ ಕಣ್ಣಿಡಲಾಗಿದೆ. ನಿನ್ನೇಯಿಂದ ಪಾಲಿಕೆ ಆವರಣದಲ್ಲಿ ಬೀಡು ಬಿಟ್ಟಿರುವ ಶಾಸಕ ಅರವಿಂದ ಬೆಲ್ಲದ, ಗಣೇಶ ಪ್ರತಿಷ್ಟಾಪನೆಗೆ ಪಟ್ಟು ಹಿಡಿದಿದ್ದಾರೆ.