ಜನರ ಜೀವನದ ಜೊತೆ ಚೆಲ್ಲಾಟ ಆಡಿದ ಕರೋನಾ, ಇನ್ನೇನು ತಣ್ಣಗಾಯ್ತು ಎಂದು ಈಗ ನಿಫಾ ಎಂಬ ಹೊಸ ತಳಿಯ ವೈರಸ್ ಕಾಣಿಸಿಕೊಂಡಿದೆ. ನಿಫಾ ವೈರಸ್ ಕೇರಳಕ್ಕೆ ಕಾಲಿಟ್ಟಿದ್ದು, ನಾಲ್ಕು ಜನರಲ್ಲಿ ಮಾರಣಾಂತಿಕ ವೈರಸ್ ಇದೆ. ನಾಲ್ಕು ಜನರ ಕಾಣಿಸಿಕೊಂಡಿದ್ದಾರೆ ಎಂಬ ವರದಿಗಳು ತಲ್ಲಣ ಸೃಷ್ಟಿಸಿವೆ.
ಪಕ್ಕದ ಕೇರಳದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ನಿಫಾ ವೈರಸ್ ನಿಯಂತ್ರಣಕ್ಕೆ ಕರ್ನಾಟಕ ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಕೇರಳ ಭಾಗದ ಗಡಿ ಜಿಲ್ಲೆಗಳಾದ ಮೈಸೂರು, ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಿಂದ ಬರುವವರನ್ನು ತೀವ್ರ ತಪಾಸಣೆಗೆ ಒಳಪಡಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಆಯುಷ್ ಇಲಾಖೆ ಸುತ್ತೋಲೆ ಹೊರಡಿಸಿದೆ.
ನಿಫಾ ವೈರಸ್ ಲಕ್ಷಣಗಳು ಕಂಡು ಬಂದಲ್ಲಿ, ತಕ್ಷಣ ಚಿಕಿತ್ಸೆ ಆರಂಭಿಸುವಂತೆ ವೈದ್ಯರಿಗೆ ಸೂಚನೆ ನೀಡಲಾಗಿದೆ.