ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಗಿನ್ನಿಸ್ ಧಾಖಲೆ ನಿರ್ಮಿಸಿದೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಗೃಹ ಸಚಿವ ಜಿ ಪರಮೇಶ್ವರ, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್ ಮಹಾದೇವಪ್ಪ ಚಾಲನೆ.
ದೇಶ, ವಿದೇಶದ ಸುಮಾರು ಎರಡೂವರೆ ಕೋಟಿ ಜನ ಏಕಕಾಲಕ್ಕೆ ಸಂವಿಧಾನ ಪೀಠಕ್ಕೆ ಓದಿದರು. ಕಳೆದ ಒಂದು ತಿಂಗಳಿನಿಂದ ಕಾರ್ಯಕ್ರಮ ಯಶಸ್ವಿಗೆ ಟೋಂಕ ಕಟ್ಟಿ ನಿಂತಿದ್ದ ಹಿರಿಯ ಐ ಎಸ್ ಅಧಿಕಾರಿ ಮಣಿವಣ್ಣನ, ಅಚ್ಚುಕಟ್ಟಾಗಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸಂವಿಧಾನ ಓದಲು ಎರಡು ಕೋಟಿಗೂ ಹೆಚ್ಚು ಜನ ತಮ್ಮ ಹೆಸರನ್ನು ಆನ್ ಲೈನ್ ನಲ್ಲಿ ನೋಂದಣಿ ಮಾಡಿಕೊಂಡಿದ್ದರು.