ಲೋಕಸಭೆಯಲ್ಲಿ ಮಂಡನೆಯಾದ ಮಹಿಳಾ ಮೀಸಲಾತಿ ಮಸೂದೆಯನ್ನು ನಾವು ಸಂಪೂರ್ಣವಾಗಿ ಸ್ವಾಗತಿಸುತ್ತೇವೆ. ಆದರೆ, ಮಹಿಳಾ ಮೀಸಲಾತಿ ಮಸೂದೆ ವಿಧೇಯಕಗಳನ್ನು ಮೊದಲು ತಂದಿದ್ದು ರಾಷ್ಟ್ರೀಯ ಕಾಂಗ್ರೆಸ್. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ನೀಡಿದ್ದೇವೆ. 2010 ಮಾರ್ಚ್ 9 ರಂದು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿದ್ದನ್ನು ಬಿಜೆಪಿ ನೆನಪಿಡಬೇಕು ಎಂದು ಕೆಪಿಸಿಸಿ ವಕ್ತಾರ ಪಿ.ಎಚ್. ನೀರಲಕೇರಿ ತಿಳಿಸಿದ್ದಾರೆ.