ಛಬ್ಬಿ ಗಣೇಶನ ಬಂದೋಬಸ್ತ ಮುಗಿಸಿ ಗರಗ ಠಾಣೆಗೆ ಮರಳುತ್ತಿದ್ದ ಪೊಲೀಸ್ ಪೇದೆ ಹುಚ್ಚೇಶ್ ಹಿರೇಗೌಡರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಶರೀರ ಛಿದ್ರ ಛಿದ್ರವಾಗಿದ್ದು, ಅಪರಿಚಿತ ವಾಹನ ಡಿಕ್ಕಿ ಹೊಡೆದು ಹೋಗಿದೆ ಎನ್ನಲಾಗಿದೆ. ಈ ದುರ್ಘಟನೆ ರಮ್ಯಾ ರೆಸಿಡೆನ್ಸಿ ಬಳಿ ನಡೆದಿದೆ. ಹುಚ್ಚೇಶನ ಜೊತೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಲಕ್ಷ್ಮೀ ಎಂಬ ಮಹಿಳಾ ಪೇದೆ ಗಂಭೀರವಾಗಿ ಗಾಯಗೊಂಡಿದ್ದಾಳೆ.
ಹುಬ್ಬಳ್ಳಿ ಧಾರವಾಡ ಬೈಪಾಸ ಸಾವಿನ ರಸ್ತೆಯಾಗಿದ್ದು, ಘಟನೆ ನಡೆದ ಸ್ಥಳದಲ್ಲಿ ಮೇಲಿಂದ ಮೇಲೆ ಅಪಘಾತಗಳು ಸಂಭವಿಸಿ, ನೂರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ದೌಡಾಯಿಸಿದ್ದಾರೆ.