ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಮಸೂದೆ ಪಾಸ ಮಾಡಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿಂದು ಕೇಂದ್ರ ಸಚಿವ ಪ್ರಲ್ಲಾದ ಜೋಶಿಯವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ಮಹಿಳಾ ಮೀಸಲಾತಿ ಮಸೂದೆ ಪಾಸ್ ಆದ ಬಳಿಕ ಮೊದಲ ಬಾರಿಗೆ ಹುಬ್ಬಳ್ಳಿಗೆ ಬಂದ ಜೋಶಿಯವರಿಗೆ ಬಿಜೆಪಿಯ ಮಹಿಳಾ ಕಾರ್ಯಕರ್ತರು ಸನ್ಮಾನಿಸಿ ಅಭಿನಂದಿಸಿದರು. ದೆಹಲಿಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದ ಜೋಶಿಯವರನ್ನು ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಬರಮಾಡಿಕೊಂಡರು. ಅಲ್ಲಿಂದ ನೇರವಾಗಿ ಪಕ್ಷದ ಕಚೇರಿಗೆ ಬಂದ ಕೇಂದ್ರ ಸಚಿವರಿಗೆ ಆರತಿ ಮಾಡಿ ಸ್ವಾಗತ ಕೋರಲಾಯಿತು
