ಷರತ್ತುಬದ್ದ ಜಾಮೀನಿನ ಮೇಲೆ ಇರುವ ಶಾಸಕ ವಿನಯ ಕುಲಕರ್ಣಿಯವರಿಗೆ ಹೈಕೋರ್ಟನಲ್ಲಿ ಮತ್ತೆ ಹಿನ್ನೆಡೆಯಾಗಿದೆ. ಧಾರವಾಡ ಜಿಲ್ಲೆಯ ಪ್ರವೇಶಕ್ಕೆ ಅನುಮತಿ ಕೋರಿ ಶಾಸಕ ವಿನಯ ಕುಲಕರ್ಣಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ, ಸರ್ವೋಚ್ಚ ನ್ಯಾಯಾಲಯ ಷರತ್ತು ವಿಧಿಸಿದ್ದು, ಷರತ್ತು ಸಡಿಲಿಕೆ ಬಗ್ಗೆ ಅಲ್ಲಿಯೇ ಅರ್ಜಿ ಹಾಕಿಕೊಳ್ಳಿ ಎಂದು ಹೇಳಿದೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ, ಷರತ್ತು ಸಡಿಲಿಕೆ ಕೋರಿ ಶಾಸಕ ವಿನಯ ಕುಲಕರ್ಣಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದರು.
