ಪ್ರಚೋದನಾತ್ಮಕ ಹೇಳಿಕೆ ಕೊಡುವ ಮೂಲಕ ಕೋಮು ಸಂಘರ್ಷಕ್ಕೆ ಯತ್ನಿಸುತ್ತಿರುವ ಶ್ರೀರಾಮ ಸೇನೆಯ ಪ್ರಮೋದ ಮುತಾಲಿಕರನ್ನು ರಾಜ್ಯದಿಂದಲೇ ಗಡಿಪಾರು ಮಾಡುವಂತೆ ಧಾರವಾಡ ಅಂಜುಮನ್ ಸಂಸ್ಥೆ ಆಗ್ರಹಿಸಿದೆ.
ಧಾರವಾಡ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಆಗ್ರಹಿಸಿರುವ ಅಂಜುಮನ್ ಸಂಸ್ಥೆ ಸದಸ್ಯರು, ಕರ್ನಾಟಕ ರಾಜ್ಯ ನೆಮ್ಮದಿಯಿಂದ ಇದೆ. ಮಸೀದಿಗಳಲ್ಲಿ ಗಣೇಶನ ಮೂರ್ತಿ ಇಡುವ ಹೇಳಿಕೆ, ಮುಸ್ಲಿಂರನ್ನು ದೇಶದ್ರೋಹಿ ಎಂದು ಕರೆಯುವದನ್ನು, ಅಂಜುಮನ್ ಇಸ್ಲಾಂ ಖಂಡಿಸುತ್ತದೆ ಎಂದು ಅಂಜುಮನ್ ಪದಾಧಿಕಾರಿಗಳು ತಿಳಿಸಿದ್ದಾರೆ. ಒಂದು ವೇಳೆ ಪ್ರಮೋದ ಮುತಾಲಿಕ ಮೇಲೆ ಕ್ರಮ ಕೈಗೊಳ್ಳದೆ ಹೋದರೆ, ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ನಡೆಸುವದಾಗಿ ಎಚ್ಚರಿಸಿದ್ದಾರೆ. ಅಂಜುಮನ ಅಧ್ಯಕ್ಷ ಇಕ್ಬಾಲ್ ಜಮಾದಾರ, ನಜೀರ ಮನಿಯಾರ್ ಸೇರಿದಂತೆ ಅಂಜುಮನ್ ಸಂಸ್ಥೆಯ ಪದಾಧಿಕಾರಿಗಳು ಅಪರ್ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
