ಪ್ರಸಕ್ತ ವರ್ಷ ಭಾರಿ ಪ್ರಮಾಣದ ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ 39 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ಹಾನಿಯಾಗಿದ್ದು, 30,482 ಕೋಟಿ ರೂ. ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಳೆ ಕೊರತೆಯಿಂದ ನಲುಗಿರುವ ಒಟ್ಟು 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಈ ಬರಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಅನುಷ್ಠಾನಗೊಳಿಸಲು ರೂ. 4,860 ಕೋಟಿ ನೆರವಿಗಾಗಿ ಕೇಂದ್ರ ಸರ್ಕಾರಕ್ಕೆ ನಿನ್ನೆ ಶಿಫಾರಸು ಮಾಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಸಿದ್ದರಾಮಯ್ಯನವರ
ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರದ ಪರಿಹಾರ ಕೇಳಲು ತೀರ್ಮಾನಿಸಲಾಗಿದೆ.
