ಕರ್ನಾಟಕ ಪೊಲೀಸರು ದೇಶದಲ್ಲಿ ಹೆಸರು ಮಾಡಿದ್ದಾರೆ. ಕರ್ನಾಟಕ ಪೊಲೀಸ್ ಬದ್ಧತೆಗೆ ಹೆಸರು ಮಾಡಿದೆ. ಅನೇಕ ಕಠಿಣ ಪ್ರಕರಣಗಳನ್ನು ಕ್ಷಣಾರ್ಧದಲ್ಲಿ ಪತ್ತೆ ಹಚ್ಚಿ ತಮ್ಮ ಸಾಮರ್ಥ್ಯ ಪ್ರದರ್ಶಿಸಿದ್ದಾರೆ. ರಾಜ್ಯದ ಜನತೆಯ ಸುರಕ್ಷತೆಯ ಹೊಣೆ ಹೊತ್ತಿರುವ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಇದೀಗ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ.
ರಜೆ ಸಂದರ್ಭದಲ್ಲಿ ಮನೆ ಬಾಗಿಲು ಹಾಕಿಕೊಂಡು ಪ್ರವಾಸ ಹೋಗುವವರು, ಆ ಸಂದರ್ಭದಲ್ಲಿ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕದಂತೆ ಮನವಿ ಮಾಡಿದ್ದಾರೆ. ಹೀಗೆ ಮಾಡುವದರಿಂದ ಮನೆಗಳ್ಳತನವಾಗುವ ಸಾಧ್ಯತೆ ಇರುತ್ತದೆ. ಪ್ರವಾಸದ ಪ್ರತಿ ಹೆಜ್ಜೆಯನ್ನು ಗೌಪ್ಯವಾಗಿಡುವಂತೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಮನವಿ ಮಾಡಿದೆ.
