ಕರಾವಳಿ ಕರ್ನಾಟಕ ಸೇರಿದಂತೆ ಹಲವೆಡೆ ಇಂದು ರಾತ್ರಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ದಕ್ಷಿಣ ಕನ್ನಡ, ಕೊಡಗು, ಚಿಕ್ಕ ಮಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ಬೀದರ, ಕಲ್ಬುರ್ಗಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ. ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ. ಅರೇಂಜ್ ಅಲರ್ಟ್ ಘೋಷಿಸಿದೆ.
115.6 ರಿಂದ 204.04 ಮಿಲಿ ಮೀಟರನಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಸಂಭವವಿದ್ದು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.