ಕಾಂಗ್ರೇಸ್ ಕಟ್ಟಾಳು, ಕೊಡುಗೈ ದಾನಿ ಎಂದೆಲ್ಲ ಕರೆಸಿಕೊಳ್ಳುವ ದಾವಣಗೆರೆ ಧಣಿ, ಶಾಸಕ ಶಾಮನೂರು ಶಿವಶಂಕರಪ್ಪನವರು ಸರ್ಕಾರದ ವಿರುದ್ದ ಗರಂ ಆಗಿದ್ದಾರೆ. ಇದ್ದಕ್ಕಿದ್ದಂತೆ ಮಾತನಾಡುವ ಶಾಮನೂರು ಶಿವಶಂಕರಪ್ಪನವರು ಕಾಂಗ್ರೇಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದ್ದಾರೆ. ವೀರಶೈವ ಮಹಾಸಭಾದ ಕಾರ್ಯಕ್ರಮದಲ್ಲಿ ಮಾತನಾಡಿದ್ದನ್ನು ಸಮರ್ಥಿಸಿಕೊಂಡ ಅವರು, ಲಿಂಗಾಯತ ಅಧಿಕಾರಿಗಳನ್ನು ಸೂಕ್ತ ರೀತಿಯಲ್ಲಿ ನಡೆಸಿಕೊಳ್ಳುತ್ತಿಲ್ಲ ಎಂದು ದೂರಿದ್ದಾರೆ. ಸಿದ್ದರಾಮಯ್ಯನವರು ಸರ್ಕಾರದಲ್ಲಿ 7 ಜನ ಲಿಂಗಾಯತ ಸಚಿವರಿದ್ದಾರೆ ಎಂದು ಹೇಳುತ್ತಿದ್ದಾರೆ. ನಾನು ಸಚಿವರ ಬಗ್ಗೆ ಮಾತನಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
