ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಪೊಲೀಸರ ಮೇಲೆಯೂ ಕಲ್ಲು ತೂರಲಾಗಿದ್ದು, ಮನೆ ಹಾಗೂ ವಾಹನಗಳ ಮೇಲೆ ಕಲ್ಲು ತೂರಿದ ಘಟನೆ ನಡೆದಿದೆ. ಕಲ್ಲು ತೂರಾಟ ನಡೆಯುತ್ತಿದ್ದಂತೆ ಎಸ್ ಪಿ ಮಿಥುನ್ ಕುಮಾರ ಪರಿಸ್ಥಿತಿ ಹತೋಟಿಗೆ ತರಲು 144 ಸೆಕ್ಷನ್ ಜಾರಿ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರನ್ನು ವಶಕ್ಕೆ ಪಡೆದಿರುವ ಪೂಲೀಸರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಸ್ಥಳದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಬೀಡು ಬಿಟ್ಟಿದ್ದು, ನಿಗಾ ವಹಿಸಿದ್ದಾರೆ.