ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ಏಪ್ರಿಲ್ 17, 2022 ರಂದು ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಇಬ್ಬರಿಗೆ ಸರ್ವೋಚ್ಚ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರವಾದಿ ಮೊಹಮ್ಮದ ಪೈಗಂಬರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಖಂಡಿಸಿ ಅಂದು ಸೇರಿದ್ದ ಗುಂಪು ಕಲ್ಲು ತೂರಾಟ ನಡೆಸಿತ್ತು. ಪೊಲೀಸ್ ವಾಹನಗಳನ್ನು ಜಕಂ ಗೊಳಿಸಲಾಗಿತ್ತು. ಗಲಭೆಯಲ್ಲಿ ತೊಡಗಿದವರನ್ನು ಜೈಲಿಗೆ ಅಟ್ಟಲಾಗಿತ್ತು. ಬಂಧನಕ್ಕೋಳಗಾದವರ ಮೇಲೆ ದೇಶದ್ರೋಹದ ಕೇಸ್ ಹಾಕಲಾಗಿತ್ತು.
ಪ್ರಕರಣಕ್ಕೆ ಸಂಬಂದಪಟ್ಟಂತೆ ಸರ್ವೋಚ್ಚ ನ್ಯಾಯಾಲಯ ನಾಲತವಾಡ ಹಾಗೂ ಸಿಕಂದರ ಎಂಬುವವರಿಗೆ ಜಾಮೀನು ಮಂಜೂರು ಮಾಡಿದೆ.
