ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಇನ್ಮೇಲೆ ಡಾ. ಎಚ್ ಡಿ ದೇವೇಗೌಡ. ಕರ್ನಾಟಕ ರಾಜಕಾರಣದ ಯಜಮಾನರು, ಮುತ್ಸದ್ದಿ ರಾಜಕಾರಣಿ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಬೆಂಗಳೂರು ವಿಶ್ವವಿಧ್ಯಾಲಯ, ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿತು.
ಬೆಂಗಳೂರು ವಿಶ್ವವಿದ್ಯಾಲಯದ 58ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಘನತೆವೆತ್ತ ರಾಜ್ಯಪಾಲರು ಥಾವರ್ ಚಾಂದ್ ಗೆಹ್ಲೋಟ್ ದೇವೇಗೌಡರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿದರು.
ಕರುನಾಡ ಹೆಮ್ಮೆಯ ಮಾಜಿ ಪ್ರಧಾನಮಂತ್ರಿಗಳಾದ ಎಚ್ ಡಿ ದೇವೇಗೌಡ ರವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿದ್ದು ಸಂತಸ ತಂದಿದೆ ಎಂದು ಉನ್ನತ ಶಿಕ್ಷಣ ಸಚಿವ ಎಮ್ ಸಿ ಸುಧಾಕರ ಹೇಳಿದರು.