ನಾನು ಕೂಡ ಅಧಿಕಾರಿಗಳಿಗೆ ದುಡ್ಡು ಕೊಟ್ಟು ಕೆಲಸ ಮಾಡಿಸಿಕೊಳ್ಳುತ್ತೇನೆ ಎಂದು ಶೃಂಗೇರಿ ಶಾಸಕ ಟಿ. ಡಿ. ರಾಜೇಗೌಡ ಜನಸಂಪರ್ಕ ಸಭೆ ಒಂದರಲ್ಲಿ ಹೇಳಿರುವ ವಿಡಿಯೋಯೊಂದನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವಿಟ್ ಮಾಡಿದ್ದಾರೆ. ನಾನು ಕೊಡ್ತೀನಿ ನೀವು ಕೊಡಬೇಕು ಎಂದು ಹೇಳುವ ಮೂಲಕ ಶಾಸಕರು ಪರೋಕ್ಷವಾಗಿ ಕಾಂಗ್ರೆಸ್ ಸರ್ಕಾರ ಇರುವಾಗ ಲಂಚ ಕೊಡುವುದು ಅನಿವಾರ್ಯ ಎಂದು ಜನರಲ್ಲಿ ಅರಿವು ಮೂಡಿಸುತ್ತಿದ್ದಾರೆಯೇ ಎಂದು ಎಚ್ ಡಿ ಕೆ ಪ್ರಶ್ನಿಸಿದ್ದಾರೆ.
