ಬಿಜೆಪಿಗೆ ಮತ್ತೊಂದು ಹೊಡೆತ ಕೊಡಲಾಗಿದೆ. ಹಿರಿಯೂರ ಕ್ಷೇತ್ರದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ ಇಂದು ಕಾಂಗ್ರೇಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ. ಬಿಜೆಪಿಯಿಂದ ಶಾಸಕಿಯಾಗಿದ್ದ ಪೂರ್ಣಿಮಾ, ಬಿಜೆಪಿಯಲ್ಲಿನ ಉಸಿರುಗಟ್ಟಿದ ವಾತಾವರಣದಿಂದ ಹೊರ ಬಂದು ಇಂದು ಕಾಂಗ್ರೇಸ್ ಸೇರುತ್ತಿದ್ದಾರೆ. ಬೆಂಗಳೂರಿನ ಕಾಂಗ್ರೇಸ್ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ಡಿ ಕೆ ಶಿವಕುಮಾರ ನೇತೃತ್ವದಲ್ಲಿ ಪೂರ್ಣಿಮಾ ಕಾಂಗ್ರೇಸ್ ಸೇರ್ಪಡೆಯಾಗಲಿದ್ದಾರೆ.
ಜಗದೀಶ ಶೆಟ್ಟರ ಅವರು ಬಿಜೆಪಿ ತ್ಯಜಿಸಿದ ಮೇಲೆ ಪೂರ್ಣಿಮಾ ಅವರು ಸಹ ಬಿಜೆಪಿ ಮುಖಂಡರ ಮೇಲೆ ಮುನಿಸಿಕೊಂಡಿದ್ದರು. ಜಗದೀಶ ಶೆಟ್ಟರ ಅವರ ಜೊತೆ ಮಾತುಕತೆ ನಡೆಸಿದ್ದರು. ಕಳೆದ ವಾರವಷ್ಟೆ ಪೂರ್ಣಿಮಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರನ್ನು ಭೇಟಿ ಮಾಡಿದ್ದರು.