ರಾಜಕೀಯ ಜಂಜಾಟದ ಮಧ್ಯೆ ಸ್ವಲ್ಪ ಸಮಯ ಬಿಡುವು ಮಾಡಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೇಟ್ ಪಂದ್ಯ ವೀಕ್ಷಿಸಿದರು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿರುವ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ವೀಕ್ಷಿಸಿದರು. ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ರೋಜರ ಬಿನ್ನಿ ಸೇರಿದಂತೆ ಬಿ ಸಿ ಸಿ ಐ ಪದಾಧಿಕಾರಿಗಳು ಸ್ವಾಗತಿಸಿದರು.
