ಕೆಎಸ್ಆರ್ಟಿಸಿಯ ಎಲ್ಲಾ ಸಿಬ್ಬಂದಿಗೆ, ಹತ್ತು ಹೃದಯ ಸಂಬಂಧಿ ವೈದ್ಯಕೀಯ ತಪಾಸಣೆಗಳನ್ನು ಮಾಡಲು ಐದು ವರ್ಷಗಳ ಅವಧಿಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಇಂದು ಜಯದೇವ ಆಸ್ಪತ್ರೆ ಮುಖ್ಯಸ್ಥ ಡಾ. ಮಂಜುನಾಥ ಅವರ ಜೊತೆ ಒಡಂಬಡಿಕೆಗೆ ಸಹಿ ಹಾಕಿದರು. ಹೃದಯ ಸಂಬಂಧಿ ತಪಾಸಣೆಗಳನ್ನು/ ಪರೀಕ್ಷೆಗಳನ್ನು ನಿರಂತರವಾಗಿ ಮಾಡುವುದರಿಂದ ಸಂಭವನೀಯ ಹೃದಯಾಘಾತವನ್ನು ತಪ್ಪಿಸಲು ಮತ್ತು ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳಲು ಸಾಧ್ಯವಾಗುವಂತೆ ಮತ್ತು ಜೀವಗಳ ರಕ್ಷಣೆಗೆ ಕಾರಣವಾಗುತ್ತದೆ.
ಸಿಬ್ಬಂದಿಗಳು ನಿಗಮದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾರೆ ಆದ್ದರಿಂದ ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ನಮ್ಮ ಜವಾಬ್ದಾರಿ ಕೂಡ ಆಗಿದೆ. ಡಾ. ಸಿ.ಎನ್ ಮಂಜುನಾಥ್ ರವರು ಕಡಿಮೆ ದರದಲ್ಲಿ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳಿಗೆ ಈ ಯೋಜನೆ ಸಹಕಾರ ನೀಡಿದ ಜಯದೇವ ಆಸ್ಪತ್ರೆಯವರಿಗೆ ಸಾರಿಗೆ ಸಚಿವರು ಅಭಿನಂದನೆ ಸಲ್ಲಿಸಿದರು.