ಧಾರವಾಡ ಜಿಲ್ಲೆಯಲ್ಲಿ ಝಿಕಾ ವೈರಸ್ ಗೆ ಸಂಬಂಧಿಸಿದಂತೆ ಯಾವದೇ ಪರೀಕ್ಷೆಯನ್ನು ನಡೆಸಿಲ್ಲ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶಶಿ ಪಾಟೀಲ, ತಿಳಿಸಿದ್ದಾರೆ. ಕರ್ನಾಟಕ ಫೈಲ್ಸ್ ಜೊತೆ ಮಾತನಾಡಿದ ಅವರು, ಝಿಕಾ ವೈರಸ್ ಗೆ ಸಂಬಂಧಪಟ್ಟಂತೆ ಆರೋಗ್ಯ ಇಲಾಖೆಯಿಂದ ಯಾವದೇ ಸೂಚನೆ ಬಂದಿಲ್ಲ. ಆದರೂ ಕಟ್ಟೆಚ್ಚರ ವಹಿಸಿದ್ದೇವೆ ಎಂದು ತಿಳಿಸಿದ್ದಾರೆ. ಆಯಾ ಜಿಲ್ಲೆಯಲ್ಲಿ ಸೊಳ್ಳೆಗಳ ಮಾದರಿಯಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, ಮಾನವನ ಶರೀರದಲ್ಲಿ ಝಿಕಾ ವೈರಸ್ ಕಂಡು ಬಂದಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಜಿಲ್ಲೆಯ ಗರ್ಭಿಣಿಯರ ಮೇಲೆ ವಿಶೇಷ ಗಮನ ವಹಿಸಲಾಗಿದೆ.