ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕ ಪ್ರಕ್ರಿಯೆ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ. ಇದಕ್ಕಾಗಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಮ್ ಸಿ ಸುಧಾಕರ ತಿಳಿಸಿದ್ದಾರೆ. 1208 ಅಭ್ಯರ್ಥಿಗಳ ನೇಮಕ ಪ್ರಕ್ರಿಯೆಗೆ ಅಧಿಕಾರಿ ವರ್ಗದಿಂದ ಯಾವುದೇ ಅಡಚಣೆಯಾಗುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದು, ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಿಸುವದಾಗಿ ಹೇಳಿದ್ದಾರೆ. ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ವಿಚಾರಕ್ಕೆ ಸರ್ಕಾರ ಕಡೆಗೂ ಸ್ಪಂಧಿಸಿದೆ.
