ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನಾವು ಲೋಕಸಭೆ ಚುನಾವಣೆ ತಯಾರಿ ಮಾಡಿದ್ದೇವೆ. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನಮ್ಮ ನಾಲ್ಕು ಗ್ಯಾರಂಟಿ ಯೋಜನೆಗಳು ಜಾರಿ ಆಗಿದ್ದು, ನಮ್ಮ ಸರ್ಕಾರ ನುಡಿದಂತೆ ನಡೆದಿದೆ.ಎಂದು ಕೆ ಪಿ ಸಿ ಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ತಿಳಿಸಿದ್ದಾರೆ.
ನಮ್ಮ ಸರ್ಕಾರ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ರೂಪಿಸುತ್ತಿದೆ. ಹೀಗಾಗಿ ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡುವ ವಿಶ್ವಾಸವಿದೆ ಎಂದು ಸಲೀಮ್ ಅಹ್ಮದ್ ಹೇಳಿದ್ದಾರೆ. ನಮ್ಮ ಪಕ್ಷ ಕನಿಷ್ಠ 20 ಸೀಟುಗಳನ್ನು ರಾಜ್ಯದಲ್ಲಿ ಗೆದ್ದು, ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
